ಪ್ರವೇಶ ಪ್ರಕ್ರಿಯೆ

ಪ್ರವೇಶ ಪ್ರಕ್ರಿಯೆ

ಅಭ್ಯರ್ಥಿಗಳು ಸ್ವತಃ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.kea.kar.nic.in ಮತ್ತು http://dte.kar.nic.inಗಳಲ್ಲಿರುವ ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ಡೌನ್ ಲೋಡ್ ಮಾಡಿಕೊಂಡು ಅರ್ಜಿಯನ್ನು ಮಾಹಿತಿ ಪುಸ್ತಕದಲ್ಲಿರುವ ಸೂಚನೆಗಳನ್ವಯ ಸಂಪೂರ್ಣ ಭರ್ತಿ ಮಾಡುವುದು. ಡಿಪ್ಲೋಮಾ ಪ್ರವೇಶದ ಆಯ್ಕೆಯು ಅರ್ಹತೆ ಮೇಲೆ ಆದರಿಸಿರುತ್ತದೆ. ಒಟ್ಟು ಸ್ಥಾನಗಳಲ್ಲಿ ಶೇಕಡ 50ರಷ್ಟು ಸಮಾಜದ ವಿವಿಧ ಗುಂಪುಗಳಿಗೆ ಮೀಸಲಿರಿಸಲಾಗಿದೆ. ಉಳಿದ ಶೇಕಡ 50 ರಷ್ಟು ಸ್ಥಾನಗಳನ್ನು SSLC ಯಲ್ಲಿ ಗಳಿಸಿದ ಅಂಕಗಳನ್ನು ಆಧರಿಸಿ ನೀಡಲಾಗುತ್ತದೆ. ಅಲ್ಲದೆ ತಾಂತ್ರಿಕ ಕೋರ್ಸುಗಳ ಪ್ರವೇಶಕ್ಕೆ ಅಭ್ಯರ್ಥಿ ಗಳಿಸಿದ SSLC ಒಟ್ಟು ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಡಿಪ್ಲೋಮ ಪ್ರವೇಶದ ಎಲ್ಲಾ ವಿವರಗಳು Admission Brochure ನಲ್ಲಿ ಇರುತ್ತದೆ. ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆಯನ್ನು 2017-18 ನೇ ಸಾಲಿನಿಂದ ಜಾರಿಗೆ ಬರುವಂತೆ ವಿದ್ಯಾರ್ಥಿಗಳ ಪ್ರವೇಶಾತಿಯನ್ನು "ಆನ್ ಲೈನ್ ಇಂಟರಾಕ್ಟೀವ್ " ಕೌನ್ಸಿಲಿಂಗ್ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲು ಸರ್ಕಾರವು ಅನುಮತಿ ನೀಡಿ ಆದೇಶಿಸಿದೆ.